2024-25ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅಭ್ಯರ್ಥಿಗಳು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ಐಟಿಐ ತರಬೇತಿ ಪಡೆದ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಸಿಗುವುದು. ಸರ್ಕಾರದ ಕೌಶಲಾಭಿವೃದ್ಧಿ ಇಲಾಖೆಯಡಿ ಡಿಪ್ಲೋಮಾ ಕೋರ್ಸು 3+1 ಪಠ್ಯಕ್ರಮ ಮೂಲಕ ತರಬೇತಿ ನೀಡಲಾಗುವುದು. 3 ವರ್ಷದ ಡಿಪ್ಲೋಮ ತರಬೇತಿ ಪಡೆದ ನಂತರ ಪ್ರತಿಷ್ಠಿತ ಕಂಪನಿಗಳಲ್ಲಿ ಕಡ್ಡಾಯ ಒಂದು ವರ್ಷದ ಇಂಟರ್ನ್ ಷಿಪ್ ನೀಡಲಾಗುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 15 ಸಾವಿರದಿಂದ 20 ಸಾವಿರದವರೆಗೆ ಶಿಷ್ಯ ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ , ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕೈಗಾರಿಕ ವಲಯ, ಬೈಕಂಪಾಡಿ ಮಂಗಳೂರು- 575011 ದೂರವಾಣಿ: 8073208137, 9008263660, 9483920114 , 0824-2408003 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.