VAO ನೇಮಕಾತಿ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹೆಚ್ಚಿನ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03.04.2024 ರವರೆಗೆಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್‌ಲೈನ್‌ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ದಿನಾಂಕ 04.05.2024 ರ ವರೆಗೆ ಅರ್ಜಿ ಸಲ್ಲಿಸಲುಹಾಗೂ ದಿನಾಂಕ: 07.05.2024 ರ ವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಕೆಲವುಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ … Read more

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನುಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ)https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲುಅವಕಾಶವನ್ನು ಕಲ್ಪಿಸಲಾಗಿದೆ.ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಕಛೇರಿ ಪ್ರಕಟಣೆ ತಿಳಿಸಿದೆ.