ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ ವತಿಯಿಂದ 2024-25 ನೇ ಸಾಲಿನ ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ 40% ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಒದಗಿಸಿದ್ದಲ್ಲಿ 5% ಅಂಕ ವಿನಾಯಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಗರಿಷ್ಟ ವಯಸ್ಸಿನ ಮಿತಿ ಇಲ್ಲ .
ಕೆ.ಎಸ್.ಎನ್.ಸಿ. ಯಿಂದ ಮಾನ್ಯತೆ ಹೊಂದಿದ ಕಾಲೇಜುಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಮಾತ್ರ ಸರಕಾರದಿಂದ ನರ್ಸಿಂಗ್ ಪರೀಕ್ಷೆಗಳು ನಡೆಯುವ ಕಾರಣ ಸರಿಯಾಗಿ ವಿಚಾರಿಸಿ ದಾಖಲಾಗುವಂತೆ ಕೋರಿದೆ. 10% ಸೀಟುಗಳನ್ನು ಸರಕಾರಿ ಕೋಟದ ವಿದ್ಯಾರ್ಥಿಗಳಿಗೆ ಕಾಯ್ದಿರಿಸುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ. ಸರಕಾರಿ ಕೋಟಾದ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಅಂಕ ಪಟ್ಟಿ ಪರಿಶೀಲನೆ ಇರುತ್ತದೆ. ಯಾವುದೇ ಕಾರಣಕ್ಕೂ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ನೀಡಿದ್ದಲ್ಲಿ ಪರಿಗಣಿಸದಂತೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.ksdneb.org ವೆಬ್ಸೈಟ್ ಗೆ ಭೇಟಿ ನೀಡುವಂತೆ ಕೋರಿದೆ.