KPSC ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ.
ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್ ಪಿ ಸಿ ) ಮತ್ತು 07( ಹೈ.ಕ.) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 14.03.2024 ರಂದು ವೃಂದವಾರು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿತ್ತು. 22.04.2024 ರಿಂದ ಅರ್ಜಿ ಸಲ್ಲಿಸಲು ಆರಂಭಿಸಿ 21.05.2024 ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಕಾಲಮಿತಿಯನ್ನು ಮುಂದೂಡಲಾಗಿತ್ತು.
ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 30.05.2024ರಿಂದ ಅವಕಾಶ ನೀಡಿದ್ದು , ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕ 30.06.2024ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.