KSRTC ವಿದ್ಯಾರ್ಥಿ ಬಸ್ ಪಾಸ್ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ
2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಕೆಎಸ್ಸಾರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ
ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನ ಐಡಿ ಮುಖೇನ ಅರ್ಜಿಯನ್ನು ಸಲ್ಲಿಸಬೇಕು.
ವಿದ್ಯಾರ್ಥಿಗಳು ಮೇ 31ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.
ಇದಲ್ಲದೆ ವಿದ್ಯಾರ್ಥಿಗಳು ಕರ್ನಾಟಕ – ಒನ್, ಗ್ರಾಮ-ಒನ್, ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕ 30ರೂ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಭೇಟಿ ನೀಡಬೇಕಾಗಿರುವ ಕೌಂಟರ್ ನ ಹೆಸರು, ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಕಳುಹಿಸಲಾಗುವುದು. ವಿದ್ಯಾರ್ಥಿ ಬಸ್ ಪಾಸ್ ಗಳನ್ನು ಜೂನ್ 1ರಿಂದ ನಿಗದಿತ ಪಾಸ್ ಕೌಂಟರ್ ಗಳಲ್ಲಿ ವಿತರಿಸಲಾಗುವುದು.
ಸರ್ಕಾರವು ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ಆದರೆ ನೆರೆ ರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯವ ಅಗತ್ಯವಿದೆ.