ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ – ಮತ್ತೊಂದು ಅವಕಾಶ
ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗು ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳೂ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಗೆ ಆನ್‌ಲೈನ್ ಅರ್ಜಿಯು ಸಾಮಾನ್ಯವಾಗಿದ್ದು, ಕೆಇಎ ನಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಆನ್‌ಲೈನ್ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಸಾಕಷ್ಟು ಬಾರಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದಾಗ್ಯೂ ಅಭ್ಯರ್ಥಿಗಳು ಮತ್ತು ಪೋಷಕರು ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲು ಕೋರುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಯುಜಿನೀಟ್ 2024 ರ ಫಲಿತಾಂಶ ಪ್ರಕಟಣಣೆಯ ನಂತರ, ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೂರು ದಿನಗಳ ಕಾಲಾವಕಾಶ ನೀಡಲಾಗುವುದು. ಕರ್ನಾಟಕದಲ್ಲಿನ ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕಗಳ ವಿವರಗಳಿಗಾಗಿ ಅಭ್ಯರ್ಥಿಗಳು ಆಗಿದ್ದಾಗ್ಗೆ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಲು ಸೂಚಿಸಿದೆ.