VAO ನೇಮಕಾತಿ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹೆಚ್ಚಿನ ಮಾಹಿತಿ ಇಲ್ಲಿದೆ
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದ
ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03.04.2024 ರವರೆಗೆ
ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ
ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ದಿನಾಂಕ 04.05.2024 ರ ವರೆಗೆ ಅರ್ಜಿ ಸಲ್ಲಿಸಲು
ಹಾಗೂ ದಿನಾಂಕ: 07.05.2024 ರ ವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಕೆಲವು
ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು
ಕೋರಿದ್ದರಿಂದ ಈ ಕೆಳಗಿನಂತೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಸ್ತರಿಸಲಾದ ಕೊನೆಯ ದಿನಾಂಕ
15.05.2024 ವರೆಗೆ
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 18.05.2024
(ಬ್ಯಾಂಕ್ ಕೆಲಸದ ವೇಳೆ ವರೆಗೆ)