ವಾಹನಗಳಿಗೆ ಸಿ.ಎಂ.ವಿ ಕಾಯ್ದೆಯಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್.ಇ.ಡಿ. ದೀಪಗಳನ್ನು ಅಳವಡಿಸುವುದು ಕಡ್ಡಾಯ

0
WhatsApp Group Join Now
Telegram Group Join Now

ಇತ್ತೀಚಿನ ದಿನಗಳಲ್ಲಿ ವಾಹನಗಳಿಗೆ ಅತೀ ಹೆಚ್ಚು ಬೆಳಕು ಹೊರಹಾಕುವ ಎಲ್.ಇ.ಡಿ. ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರುಗಡೆ ಬರುವ ಸವಾರರಿಗೆ ವಾಹನ ಚಲಾಯಿಸಲು ತೊಂದರೆಯುಂಟಾಗುತ್ತಿದೆ. ಅಷ್ಟೇ ಅಲ್ಲದೆ ಪ್ರಖರ ಬೆಳಕಿನ ದೀಪಗಳನ್ನು ಬಳಸುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬರುತ್ತಿದೆ.
ಎಲ್ಲಾ ವಾಹನ ಸವಾರರು ಕಣ್ಣು ಕುಕ್ಕುವ, ಪ್ರಖರ ಬೆಳಕನ್ನು ಹೊರ ಹಾಕುವ ದೀಪಗಳನ್ನು ವಾಹನಗಳಲ್ಲಿ ಬಳಸದೆ, ಕೇಂದ್ರ ಮೋಟಾರು ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್ ಲೈಟ್ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿ.ಎಂ.ವಿ. ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಅಂತಹ ವಾಹನ ಸವಾರರಿಗೆ ಐ.ಎಂ.ವಿ. ಕಾಯ್ದೆಯ ಕಲಂ 177ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ.
ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಹೆಚ್ಚು ಪ್ರಖರ ಹೊರಹೊಮ್ಮುವ ದೀಪಗಳು ಕಂಡು ಬಂದಲ್ಲಿ ಅಂತಹ ವಾಹನ ಸವಾರರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಲಾಗಿದೆ. ಅಲ್ಲದೇ ಘಟಕಾಧಿಕಾರಿಗಳು ಜುಲೈ ಮಾಹೆಯಲ್ಲಿ ಈ ಕುರಿತು ವಿಶೇಷ ಕಾರ್ಯಾಚರಣೆ ನಡೆಸಿ ವರದಿಯನ್ನು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರ್ದೇಶಕರ ಕಛೇರಿ ಬೆಂಗಳೂರು ಇಲ್ಲಿಗೆ 31/07/2024ರ ಒಳಗಾಗಿ ಸಲ್ಲಿಸುವಂತೆ ಶ್ರೀ ಅಲೋಕ್ ಕುಮಾರ್ ಐ.ಪಿ.ಎಸ್. ಹೆಚ್ಚುವರಿ ಪೋಲಿಸ್ ಮಹಾ ನಿರ್ದೇಶಕರು, ಸಂಚಾರ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now

You may have missed