ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಸ್ವಯಂ ಘೋಷಣೆಗೆ ಸೂಚನೆ

WhatsApp Group Join Now
Telegram Group Join Now

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಲು ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಹಾಗೂ ಉದ್ಯೋಗಿ ಅಲ್ಲವೆಂದು ಸ್ವಯಂ ಘೋಷಣೆ ಮಾಡಬೇಕು. ಮಾರ್ಚ್ ಎಪ್ರಿಲ್ ಮತ್ತು ಮೇ ತಿಂಗಳ ಸ್ವಯಂ ದೃಢೀಕರಣ ಮಾಡಿಕೊಳ್ಳದಿರುವ ಫಲಾನುಭವಿಗಳಿಗೆ ಜೂನ್ 25ರವರೆಗೆ ಅವಕಾಶವಿದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಪಾಸ್ ಪುಸ್ತಕ ಹೊಂದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್ಸೈಟ್ https:/sevasindhugs.Karnataka.gov.in ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆ.

ಅಧಿಕೃತ ವೆಬ್ಸೈಟ್

Leave a Comment

WhatsApp Group Join Now
Telegram Group Join Now